ತಮಿಳುನಾಡು | ಬಿಎಸ್‌ಪಿ ಅಧ್ಯಕ್ಷನ ಹತ್ಯೆ; ತನಿಖೆಗೆ 10 ವಿಶೇಷ ತಂಡ ರಚನೆ ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (55) ಅವರನ್ನು ಆರು ಮಂದಿ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೆರಂಬೂರ್‌ನಲ್ಲಿರುವ ಅವರ ನಿವಾಸದ ಸಮೀಪ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ತನಿಖೆಗೆ 10 ವಿಶೇಷ ತಂಡ ರಚನೆ... ಕೊಲೆಯ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ. ತನಿಖೆಗೆ ಚೆನ್ನೈ ಪೊಲೀಸ್ 10 ವಿಶೇಷ ತಂಡ ರಚಿಸಿದೆ. ಅಲ್ಲದೆ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದ ಗ್ಯಾಂಗ್, ಆರ್ಮ್‌ಸ್ಟ್ರಾಂಗ್ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನೈ ಕಾರ್ಪೋರೇಷನ್‌ನ ಮಾಜಿ ಕೌನ್ಸಿಲರ್ ಆಗಿದ್ದ ಆರ್ಮ್‌ಸ್ಟ್ರಾಂಗ್ ಹತ್ಯೆ ಖಂಡಿಸಿ ಬಿಎಸ್‌ಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. | 10 . ., . () : ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.