ಯುಪಿಎಸ್‌ಸಿ: ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗವು(ಯುಪಿಎಸ್‌ಸಿ) ಜೂನ್‌ 16ರಂದು ನಡೆಸಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ನಾಗರೀಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವೆಗಳ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪೂರ್ವಭಾವಿ ಪರೀಕ್ಷೆಯ ಅಂಕ, ಕಟ್‌ಆಫ್‌ ಅಂಕ ಮತ್ತು ಉತ್ತರಗಳನ್ನು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಫಲಿತಾಂಶದ ಬಗ್ಗೆ ಮತ್ತು ಇತರ ಮಾಹಿತಿಗಾಗಿ ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.