ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು. ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ‘ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು‘ ಎಂದು ಕುಮಾರಸ್ವಾಮಿ ಹೇಳಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು - ಸತ್ಯಮಂಗಲ - ಚಾಮರಾಜನಗರ (ಕನಕಪುರ - ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕುಮಾರಸ್ವಾಮಿ ಕೋರಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.