ನೀಟ್ ಪರೀಕ್ಷೆ ವಿಚಾರದಲ್ಲಿ ಪ್ರಧಾನಿ ಮೋದಿ ಮೌನ: ರಾಹುಲ್ ಗಾಂಧಿ ವಾಗ್ದಾಳಿ ನವದೆಹಲಿ: ನೀಟ್ ಪರೀಕ್ಷೆ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ‌ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ' ಎಂದು ಹೇಳಿದ್ದಾರೆ. परीक्षा में 24 लाख से अधिक छात्रों के भविष्य के साथ हुए खिलवाड़ पर भी नरेंद्र मोदी हमेशा की तरह मौन धारण किए हुए हैं। बिहार, गुजरात और हरियाणा में हुई गिरफ्तारियों से साफ है कि परीक्षा में योजनाबद्ध तरीके से संगठित भ्रष्टाचार हुआ है और ये भाजपा शासित राज्य पेपर लीक का… 'ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಆರೋಪಿಗಳನ್ನು ಬಂಧಿಸಿರುವುದೇ ಸಾಕ್ಷಿ. ಬಿಜೆಪಿ ಆಡಳಿತವಿರುವ ಈ ರಾಜ್ಯಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರವಾಗಿವೆ' ಎಂದು ಅವರು ಪ್ರತಿಪಾದಿಸಿದ್ದಾರೆ. 'ಪ್ರಶ್ನೆ ಪತ್ರಿಕೆ ಸೋರಿಕೆಗೆ ಮುಕ್ತಿ ನೀಡುವ ಉದ್ದೇಶದಿಂದ ಕಠಿಣ ಕಾನೂನು ರೂಪಿಸಿ ಯುವಕರ ಭವಿಷ್ಯವನ್ನು ಸುಭದ್ರಗೊಳಿಸುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದ್ದೆವು. ಇಂದು ಪ್ರತಿಪಕ್ಷವಾಗಿ ಆ ಜವಾಬ್ದಾರಿಯನ್ನು ನಿರ್ವಹಿಸಲು ದೇಶದ ವಿದ್ಯಾರ್ಥಿಗಳ ಧ್ವನಿಯಾಗಿ ಸಂಸತ್ತಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಇಂತಹ ಕಠಿಣ ನೀತಿಗಳನ್ನು ರೂಪಿಸಲು ಬದ್ಧರಾಗಿದ್ದೇವೆ' ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.