ಘಾಜಿಯಾಬಾದ್ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡಃ ಐವರು ಸಾವು ಘಾಜಿಯಾಬಾದ್: ಇಲ್ಲಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬುಧವಾರ ತಡ ರಾತ್ರಿ ಹಾಜಿಪುರದಲ್ಲಿರುವ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮಹಿಳೆ, ಮಗು ಸೇರಿದಂತೆ ಹಲವರನ್ನು ರಕ್ಷಣೆ ಮಾಡಿದ್ದಾರೆ. ಹಾಗೂ ಕಟ್ಟಡಕ್ಕೆ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು ಘಟನೆ ಸಂಬಂಧ ತನಿಖೆ ಆರಂಭಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.