ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಲಿರುವ ನೆರೆಯ ದೇಶಗಳ ಗಣ್ಯರು ನವದೆಹಲಿ: ಎನ್‌ಡಿಎ ಒಕ್ಕೂಟದ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ, ಜೂನ್ 8ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೆರೆಯ ಹಲವು ರಾಷ್ಟ್ರಗಳ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಿರುವುದಕ್ಕೆ ದೂರವಾಣಿ ಮೂಲಕ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಈ ಸಂದರ್ಭ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನೀಡಿದ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎಂದು ಶ್ರೀಲಂಕಾದ ಅಧ್ಯಕ್ಷರ ಮಾಧ್ಯಮ ವಿಭಾಗ ತಿಳಿಸಿದೆ. ' " - ' . , - ." ../KECMjjOQ3A ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸಹ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಬುಧವಾರದ ದೂರವಾಣಿ ಸಂಭಾಷಣೆ ವೇಳೆ ನೇಪಾಳ ಪ್ರಧಾನಿಗೆ ಮೋದಿ ಆಹ್ವಾನ ನೀಡಿದ್ದು, ಅದನ್ನು ದಹಾಲ್ ಒಪ್ಪಿಕೊಂಡಿದ್ದಾರೆ’ ಎಂದು ನೇಪಾಳದ ಅಧಿಕಾರಿಗಳು ತಿಳಿಸಿದ್ದಾರೆ. - : . “ ’ ,” . ../ASQ3QW3dfQ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ನಾಳೆ ನವದೆಹಲಿಗೆ ಆಗಮಿಸಲಿದ್ದು, ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದವರೆಗೂ ಭಾರತದಲ್ಲೇ ಇರಲಿದ್ದಾರೆ. ಜೂನ್ 9ರಂದು ಅವರು ನಿರ್ಗಮಿಸಲಿದ್ದಾರೆ. , 7 - 8. 9. ../7ZgJ5xbwzJ ನರೇಂದ್ರ ಮೋದಿ ನೇತೃತ್ವದ ಎನ್‌ಡೆ ಒಕ್ಕೂಟವು 3ನೇ ಬಾರಿಗೆ ಬಹುಮತ ಪಡೆದು ಅಧಿಕಾರಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಸಿಂಗಪುರದ ಪ್ರಧಾನಿ ವಾಂಗ್ ಸೇರಿ ವಿಶ್ವದ 75 ಗಣ್ಯರು ಶುಭಾಶಯ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.