74 ಸಾವಿರ ಮತಗಳ ಅಂತರದಿಂದ ಗೆದ್ದ ನಟಿ ಕಂಗನಾ ರನೌತ್ ಮಂಡಿ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರನೌತ್ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 74,755 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕಂಗನಾ ರನೌತ್ ಅವರು 5,37,002 ಮತಗಳನ್ನು ಪಡೆದರೆ, ವಿಕ್ರಮಾದಿತ್ಯ ಸಿಂಗ್ ಅವರು 4,62,267 ಮತಗಳನ್ನು ಪಡೆದಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಂಗನಾ, ನನ್ನ ಗೆಲುವಿನ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ‘ಕುಟುಂಬ ರಾಜಕಾರಣದ ವಿರುದ್ಧ ಮಂಡಿಯ ಜನ ಮತ ಚಲಾಯಿಸಿದ್ದು, ಜನಸಾಮಾನ್ಯರ ಪರ ನಿಂತಿದ್ದಾರೆ. ಮಂಡಿ ಕ್ಷೇತ್ರದ ಜನರಿಗಾಗಿ ಪೂರ್ಣ ಮನಸ್ಸಿನಿಂದ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಇದೇ ವೇಳೆ ಹಿಮಾಚಲ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್‌ ಠಾಕೂರ್‌, ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದ್ದಾರೆ. ‘ಕಂಗನಾ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದ ಜನರಿಗೆ ಮಂಡಿ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ದೇಶದ ಜನರ ಆಶೀರ್ವಾದದಿಂದಾಗಿ ಮೋದಿ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಲಿದ್ದಾರೆ’ ಎಂದು ಜೈರಾಮ್ ಠಾಕೂರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. # | ' .#LokSabhaElections2024 ../BLuxyNvO3o ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.