| ‘ರೀಮಲ್’ ಚಂಡಮಾರುತದ ಅಬ್ಬರ; ಪ್ರವಾಹಕ್ಕೆ ಮತ್ತೆ ಮೂವರ ಸಾವು ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು, ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸುಮಾರು 5.35 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ರೀಮಲ್’ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು. ಅನೇಕ ಪ್ರದೇಶಗಳಲ್ಲಿ ಪ್ರವಾಹಪೀಡಿತ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. 13 ಜಿಲ್ಲೆಗಳಲ್ಲಿ 5,35,246 ಜನರು ಪ್ರವಾಹಪೀಡಿತರಾಗಿದ್ದು, ಭಾನುವಾರ ಕಾಚಾರ್‌ನಲ್ಲಿ ಇಬ್ಬರು ಹಾಗೂ ನಾಗಾಂವ್‌ನಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ತಿಳಿಸಿದೆ. ಕೊಪಿಲಿ, ಬರಾಕ್, ಕುಶಿಯಾರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನಾಗಾಂವ್ ಜಿಲ್ಲೆಯಲ್ಲಿ 3,03,567 ಮಂದಿ ಬಾಧಿತರಾಗಿದ್ದರೆ, ಕಾಚಾರ್‌ನಲ್ಲಿ 1,09,798 ಹಾಗೂ ಹೊಜೈಯಲ್ಲಿ 86,382 ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 39,000ಕ್ಕೂ ಹೆಚ್ಚು ಮಂದಿ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯಾಡಳಿತ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ರಸ್ತೆಗಳು, ಸೇತುವೆಗಳು ಮತ್ತು ಇತರ ಆಸ್ತಿ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. # | : . ' ' 33 . 13 . ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.