ಪುಲ್ವಾಮಾ: ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸೋಮವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ದೊರೆತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಉಗ್ರರು ಗುಂಡು ಹಾರಿಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಗುಂಡಿನ ಚಕಮಕಿ ವೇಳೆ ಎರಡೂ ಕಡೆಗಳಲ್ಲಿ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದೂ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.