ದೆಹಲಿ: ಕ್ಯಾಬ್‌ ಚಾಲಕನ ಇರಿದು ಹತ್ಯೆ ನವದೆಹಲಿ: ಕ್ಯಾಬ್‌ ಚಾಲಕನನ್ನು ಇರಿದು ಹತ್ಯೆ ಮಾಡಿದ ಘಟನೆ ಈಶಾನ್ಯ ದೆಹಲಿಯಲ್ಲಿ ಗುರುವಾರ ರಾತ್ರಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ 11:50ರ ಹೊತ್ತಿಗೆ ಗಾಯಗೊಂಡ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಿದ್ದು, ನಮ್ಮ ತಂಡ ಅಲ್ಲಿಗೆ ತೆರಳಿ ಗಾಯಗೊಂಡ ಚಾಲಕನ್ನು ಆಸ್ಪತ್ರೆಗೆ ದಾಖಲಿಸಿತ್ತು. ಆದರೆ ಅಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ. ಮೃತ ಕ್ಯಾಬ್‌ ಚಾಲಕನನ್ನು ದೆಹಲಿಯ ಶಾಸ್ತ್ರಿ ಪಾರ್ಕ್‌ನ ನಿವಾಸಿ ಜೊಹಾರ್‌ ಅಬ್ಬಾಸ್‌ (28) ಎಂದು ಗುರುತಿಸಲಾಗಿದೆ. ಜೊಹಾರ್‌ ಅವರ ಹಣೆ, ಮಣಿಕಟ್ಟು ಮತ್ತು ಎದೆಯ ಮೇಲೆ ಇರಿತದ ಗಾಯಗಳಿದ್ದವು. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.