ಮುಂಬೈ | ಫುಡ್ ಸ್ಟಾಲ್‌ನಲ್ಲಿ ಸಿಲಿಂಡರ್ ಸ್ಫೋಟ; 9 ಮಂದಿಗೆ ಗಾಯ ಮುಂಬೈ: ನಗರದ ಫುಡ್ ಸ್ಟಾಲ್‌ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಡೊಂಬಿವಲಿಯ ಟಂಡನ್ ರಸ್ತೆಯಲ್ಲಿರುವ ಫುಡ್ ಸ್ಟಾಲ್‌ನಲ್ಲಿ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೊದಲು ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಡೊಂಬಿವಿಲಿಯ ಅಗ್ನಿಶಾಮಕದಳ ಅಧಿಕಾರಿಗಳು ತಿಳಿಸಿದ್ದಾರೆ. , : , , . , : ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.