2020 | ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ತಮ್ಮ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯ ನೀಡಿರುವ ಆದೇಶದ ಸಂಪೂರ್ಣ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.