ಥಾಣೆ, ಪಾಲ್ಘರ್‌ನಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ ಥಾಣೆ/ಪಾಲ್ಘರ್: ಮಹಾರಾಷ್ಟ್ರದ ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಡೀ ಭಾರಿ ಮಳೆಯಾಗಿದ್ದು , ಹಲವು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಥಾಣೆ ನಗರದಲ್ಲಿ 37.06 ಮಿ.ಮೀ ಮಳೆಯಾಗಿದೆ. ನಗರದ ಕೆಲವು ಪ್ರದೇಶಗಳಲ್ಲಿ ಮರಗಳು ಧರೆಗುರುಳಿವೆ ಎಂದು ವರದಿಯಾಗಿದೆ. ಭಾನುವಾರ ಮಧ್ಯರಾತ್ರಿ 12.30 ರಿಂದ 1.30ರ ನಡುವೆ ಗರಿಷ್ಠ 16.76 ಮಿ.ಮೀ ಮಳೆ ದಾಖಲಾಗಿದ್ದರೆ, 3.30 ರಿಂದ 4.30 ರ ನಡುವೆ 10.93 ಮಿ.ಮೀ ಮಳೆಯಾಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ವಿಪತ್ತು ನಿರ್ವಹಣಾ ಕೇಂದ್ರದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ. ನೆರೆಯ ಪಾಲ್ಘರ್‌ನಲ್ಲಿಯೂ ಭಾರಿ ಮಳೆ ಸುರಿದಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.