ದೆಹಲಿ | ಅಗ್ನಿ ಅವಘಡ: 12 ಗುಡಿಸಲುಗಳು ಭಸ್ಮ ನವದೆಹಲಿ: ಆಗ್ನೇಯ ದೆಹಲಿಯ ಚಿಲ್ಲಾ ಖಾದರ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 12 ಗುಡಿಸಲುಗಳು ಸುಟ್ಟು ಭಸ್ಮಗೊಂಡಿವೆ ಎಂದು ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದ್ದಾರೆ. 'ಇಂದು(ಶನಿವಾರ) ಬೆಳಿಗ್ಗೆ 10.46‌ಕ್ಕೆ ಘಟನೆ ಬಗ್ಗೆ ಮಾಹಿತಿ ಬಂದಿದೆ. ತಕ್ಷಣ ಅಗ್ನಿಶಾಮಕ 7 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಸುಮಾರು ಒಂದು ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತರಲಾಯಿತು' ಎಂದು ಡಿಎಫ್‌ಎಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.