ಪ್ರಧಾನಿ ಮೋದಿ ನಾಯಕತ್ವದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ: ಸಿಎಂ ಶರ್ಮಾ ಜೈಪುರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ’ ಎಂದು ಹೇಳಿದ್ದಾರೆ. ದೌಸಾ ಜಿಲ್ಲೆಯ ಮೆಹಂದಿಪುರದಲ್ಲಿರುವ ಬಾಲಾಜಿ ದೇವಸ್ಥಾನಕ್ಕೆ ಸಿಎಂ ಶರ್ಮಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಮತ್ತು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಸಹ ಇದ್ದರು. ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಲಿ. ರಾಜ್ಯ ಮತ್ತು ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು. ಸಿಎಂ ಶರ್ಮಾ ಮತ್ತು ನಾಯಕರ ಭೇಟಿ ಹಿನ್ನೆಲೆ ದೇವಸ್ಥಾನದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.