ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ ನವದೆಹಲಿ: ಅಡ್ಮಿರಲ್‌ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ‌ಅಧಿಕಾರ ಸ್ವೀಕರಿಸಿದರು. 1964ರ ಮೇ 15 ರಂದು ಜನಿಸಿದ ತ್ರಿಪಾಠಿ ಅವರು, ಖಡಕ್‌ವಾಸ್ಲಾದ ಸೈನಿಕ್ ಸ್ಕೂಲ್ ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1985ರಲ್ಲಿ ಅವರನ್ನು ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನಿಯೋಜಿಸಲಾಗಿತ್ತು. # | . . ../06QjKpCZwr ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವ ಮೊದಲು ತ್ರಿಪಾಠಿ ಅವರು ನೌಕಾಪಡೆಯ ಉಪ ಮುಖ್ಯಸ್ಥರಾಗಿ(ವೈಸ್‌ ಅಡ್ಮಿರಲ್‌) ಸೇವೆ ಸಲ್ಲಿಸಿದ್ದರು. ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ಇವರು ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವಾ ಅನುಭವ ಹೊಂದಿದ್ದಾರೆ. ಜತೆಗೆ ಅತಿ ವಿಶಿಷ್ಟ ಸೇವಾ ಪದಕ () ಮತ್ತು ನವೋ ಸೇನಾ ಪದಕ ()ಗಳನ್ನು ಪಡೆದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.