| ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು (ಏ.26) ಆರಂಭಗೊಂಡಿತು. ಎಂಟು ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನ 49 ಕ್ಷೇತ್ರಗಳಿಗೆ ಅಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ. ಈ ಕುರಿತು ಅಧಿಸೂಚನೆಯನ್ನೂ ಹೊರಡಿಸಿದೆ. ಐದನೇ ಹಂತದಲ್ಲಿ ಬಿಹಾರ, ಜಾರ್ಖಂಡ್‌, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದರು. ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಮೇ 4ರಂದು ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಮೇ 6 ಕೊನೆಯ ದಿನಾಂಕವಾಗಿದೆ ಎಂದು ವಿವರಿಸಿದರು.‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.