ಆಕಸ್ಮಿಕವಾಗಿ ಹಾರಿದ ಗುಂಡು: ಕಾನ್‌ಸ್ಟೆಬಲ್‌ ಸಾವು ರಾಯಪುರ: ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಕಾನ್‌ಸ್ಟೆಬಲ್‌ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಪೊಲೀಸ್‌ ಗಾಯಗೊಂಡಿರುವ ಘಟನೆ ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಾರ್ಸೂರ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಡಿಆರ್‌ಜಿ ಮತ್ತು ಬಸ್ತಾರ್‌ ಫೈಟರ್‌ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.