: 'ಜೈಲಿಗೆ ಉತ್ತರ ಮತಗಳಲ್ಲಿ ಕೊಡುತ್ತೇವೆ': ಎಎಪಿ ಪ್ರಚಾರ ಗೀತೆ ಬಿಡುಗಡೆ ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ. ಎಎಪಿ ಶಾಸಕ ದಿಲೀಪ್ ಪಾಂಡೆ ಬರೆದು ಹಾಡಿರುವ ' ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' (ಜೈಲಿಗೆ ಉತ್ತರ ಮತಗಳಲ್ಲಿ ನೀಡುತ್ತೇವೆ) ಗೀತೆಯನ್ನು ಎಎಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಬಿಡುಗಡೆ ಮಾಡಿದರು. ಹಾಡಿಕೆ ' ' ಎಂಬ ಶೀರ್ಷಿಕೆ ನೀಡಲಾಗಿದೆ. 🔥👇 ' 2024 🎶🎵# ../8dJPAhN3wx 'ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ' ಎಂದು ಪಾಂಡೆ ಹೇಳಿದ್ದಾರೆ. ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.