ಕವಿತಾ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್‌ ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ದೆಹಲಿಯ ಕೋರ್ಟ್‌ ಕಾಯ್ದಿರಿಸಿದೆ. ಆರೋಪಿ ಮತ್ತು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಪರ ವಕೀಲರ ವಾದವನ್ನು ಸಿಬಿಐ ಮತ್ತು ಜಾ‌ರಿ ನಿರ್ದೇಶನಾಲಯದ (ಇ.ಡಿ) ವಿಶೇಷ ನ್ಯಾಯಾಧೀಶರು ‌ಸೋಮವಾರ ಆಲಿಸಿದರು. ನಂತರ ತೀರ್ಪನ್ನು ಮೇ 2ರವರೆಗೆ ಕಾಯ್ದಿಸಿದರು. ಇದೇ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆಯೂ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆ ನಡೆಸಿದರು. ಇ.ಡಿ ಮತ್ತು ಸಿಬಿಐ ದಾಖಲಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕವಿತಾ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.