ಅನಾರೋಗ್ಯದ ಕಾರಣ ಇಂಡಿಯಾ ಕೂಟದ ರ‍್ಯಾಲಿಗೆ ರಾಹುಲ್ ಗಾಂಧಿ ಗೈರು ನವದೆಹಲಿ: ಅನಾರೋಗ್ಯದ ಕಾರಣ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಂಚಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿ ಕೂಟದ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. श्री राहुल गांधी आज सतना और रांची में चुनाव प्रचार के लिए पूरी तरह से तैयार थे, जहां की रैली हो रही है। लेकिन वह अचानक बीमार हो गए हैं और फिलहाल नई दिल्ली से बाहर नहीं जा सकते हैं। कांग्रेस अध्यक्ष श्री मल्लिकार्जुन खरगे जी अवश्य सतना में जनसभा को संबोधित करने के बाद रांची… ಸಾತ್ನಾ ಮತ್ತು ರಾಂಚಿಯಲ್ಲಿ ಇಂದು ಪ್ರಚಾರಕ್ಕೆ ಸಜ್ಜಾಗಿದ್ದ ರಾಹುಲ್ ಗಾಂಧಿ ಅವರು ಹಠಾತ್ ಅಸ್ವಸ್ಥಗೊಂಡಿದ್ದು, ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ಅವರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.