ಕಾಶ್ಮೀರದಲ್ಲಿ ವಲಸೆ ಕಾರ್ಮಿಕನ ಕೊಂದ ಉಗ್ರರು: ವಾರದಲ್ಲಿ ಎರಡನೇ ಘಟನೆ ಶ್ರೀನಗರ: ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಅನಂತನಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ರಾಜು ಶಾ ಎಂದು ಗುರುತಿಸಲಾಗಿದೆ. , #, . # . .@ ://./uWSJI2cgeO ಶಂಕಿತ ಉಗ್ರರು ರಾಜು ಶಾ ಮೇಲೆ ಗುಂಡು ಹಾರಿಸಿದ್ದರು. ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗೆ ರಾಜು ಶಾ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಾರದ ಹಿಂದೆ ಡೆಹ್ರಾಡೂನ್‌ ಮೂಲದ ವ್ಯಕ್ತಿಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.