ಖರ್ಗೆ ಕರ್ನಾಟಕ ಬಿಡದಿದ್ದರೆ ಸೇರುತ್ತೇನೆ ಎಂದಿದ್ದರು ಸಿದ್ದರಾಮಯ್ಯ: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ ಅನ್ನು ಬೆದರಿಸಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೇರೆ ಸಮಾಜದ ನಾಯಕರ ಏಳಿಗೆಯನ್ನು ಸಿದ್ದರಾಮಯ್ಯ ಎಂದಿಗೂ ಸಹಿಸಿಲ್ಲ; ಸಹಿಸುವುದೂ ಇಲ್ಲ’ ಎಂದು ದೂರಿದರು. ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಬದಲಾವಣೆ ನೋಡಿದ ಮೇಲೆ ಡಿ.ಕೆ. ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗುತ್ತಿದೆ. ಕಾಂಗ್ರೆಸ್‌ಗೆ ಈಗ ಕುಮಾರಸ್ವಾಮಿಯೇ ಗುರಿ’ ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.