ಮಹಿಳೆಯ ಅರೆಬೆತ್ತಲೆ ಮೆರವಣಿಗೆ: ಇಬ್ಬರ ಬಂಧನ ಜೈಪುರ: ವಿವಾಹಿತ ವ್ಯಕ್ತಿ ಜತೆ ಸಂಬಂಧ ಹೊಂದಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸರ್ವಾಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅರೆಬೆತ್ತಲೆಯಾಗಿರುವ ಸಂತ್ರಸ್ತೆಯ ಕೂದಲಿಡಿದು ಮಹಿಳೆಯೊಬ್ಬರು ಎಳೆದುಕೊಂಡು ಹೋಗಿತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಈ ಕುರಿತು ಸಂದಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ಸಮಾಲೋಚನೆಗೆ ಕಳುಹಿಸಲಾಗಿದೆ ಎಂದು ಬಾರ್ಮರ್‌ನ ಪೊಲೀಸ್‌ ವರಿಷ್ಠಾಧಿಕಾರಿ ಕುಂದನ್‌ ಕವಾರಿಯಾ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.