ಲೋಕಸಭೆ ಚುನಾವಣೆ: ಎಐಎಡಿಎಂಕೆಗೆ ಒವೈಸಿ ಬೆಂಬಲ ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ ಎಂದು ಎಐಎಂಐಎಂ ಘೋಷಿಸಿದೆ. ‘ಈ ಮೈತ್ರಿಯು ವಿಧಾನಸಭಾ ಚುನಾವಣೆಯಲ್ಲೂ ಮುಂದುವರಿಯಲಿದೆ’ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ ಅವರು ಶನಿವಾರ ‘ಎಕ್ಸ್‌’ನಲ್ಲಿ ಪ್ರಕಟಿಸಿದರು. ‘ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರಾಕರಿಸಿದೆಯಲ್ಲದೆ, ಭವಿಷ್ಯದಲ್ಲಿ ಎಂದಿಗೂ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದೆ. ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿಯೂ ಅದು ಭರವಸೆ ನೀಡಿದೆ. ಆದ್ದರಿಂದ, ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ’ ಎಂದು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.