ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್‌ ಅರ್ಜಿ ವಿಚಾರಣೆ ನಾಳೆ ನವದೆಹಲಿ: ತಮ್ಮ ಬಂಧನವನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ. ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಪ್ರಕರಣಗಳ ಪಟ್ಟಿಯಂತೆ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಪೀಠವು ದೆಹಲಿ ಹೈಕೋರ್ಟ್‌ನ ಏ. 9 ರ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಏ. 15ರಂದು ಆಲಿಸಲಿದೆ ಎಂದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.