ಮುಂಬೈ | ವೇಶ್ಯಾವಾಟಿಕೆ: ಆಫ್ರಿಕಾ ಮೂಲದ ಎಂಟು ಮಹಿಳೆಯರ ರಕ್ಷಣೆ, ಇಬ್ಬರ ಬಂಧನ ಥಾಣೆ: ನವಿ ಮುಂಬೈಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಾರ್‌ಘರ್‌ ಎಂಬಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ಇನ್‌ಪೆಕ್ಟರ್ ರಾಜೀವ್ ಶೆಜ್ವಾಲ್ ತಿಳಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆ ಪರಾರಾಯಾಗಿದ್ದಾಳೆ. 25ರಿಂದ 30 ವರ್ಷ ವಯೋಮಾನದ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.