ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿ: ಮಮತಾ ಬ್ಯಾನರ್ಜಿ ಕಲ್ಯಾಣಿ (ಪಶ್ಚಿಮ ಬಂಗಾಳ): 'ಇಂಡಿಯಾ' ಮೈತ್ರಿಕೂಟವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದೇ ಗ್ಯಾರಂಟಿಯಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ. ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಸಂದೇಶ್‌ಖಾಲಿ ಪ್ರಕರಣದಲ್ಲಿ ಬಿಜೆಪಿ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಪಶ್ಚಿಮ ಬಂಗಾಳದ ಮಹಿಳೆಯರ ಪ್ರತಿಷ್ಡೆಯನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬಾರಿ ಎನ್‌ಡಿಎ ಮೈತ್ರಿಕೂಟಕ್ಕೆ 200 ಸೀಟುಗಳು ಲಭಿಸುವುದು ಕಷ್ಟ. ಹೀಗಾಗಿ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದೇ ಗ್ಯಾರಂಟಿಯಾಗಿದೆ ಎಂದು ಮಮತಾ ಹೇಳಿದ್ದಾರೆ. ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ ಮಾರಾಟ ಕೇವಲ ಚುನಾವಣಾ ಗಿಮಿಕ್‌?: ಕಾಂಗ್ರೆಸ್ ‘ನಮ್ಮ ಧಾರ್ಮಿಕ ಆಚರಣೆಗಳು ಅಥವಾ ಆಹಾರ ಪದ್ಧತಿಗಳು ಎಲ್ಲದರಲ್ಲೂ ಅವರು (ಬಿಜೆಪಿಯವರು) ಹಸ್ತಕ್ಷೇಪ ಮಾಡುತ್ತಿದ್ದಾರೆ. ನಾವು ಏನನ್ನು ತಿನ್ನಬೇಕು ಎಂಬುದನ್ನು ಅವರು ನಿರ್ಧರಿಸುವುದು ಸ್ವೀಕಾರಾರ್ಹವಲ್ಲ ಎಂದು ಮಮತಾ ವಾಗ್ದಾಳಿ ನಡೆಸಿದ್ದಾರೆ. 'ಸ್ಥಳೀಯ ಬಿಜೆಪಿ ನಾಯಕರೊಬ್ಬರು ಹಲವಾರು ಮಹಿಳೆಯರಿಂದ ಖಾಲಿ ಹಾಳೆಯ ಮೇಲೆ ಸಹಿ ತೆಗೆದುಕೊಂಡಿದ್ದರು. ನಂತರ, ಟಿಎಂಸಿ ಮುಖಂಡರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ದೂರುಗಳನ್ನು ಅದೇ ಹಾಳೆಗಳ ಮೇಲೆ ಬರೆಯಲಾಯಿತು ಎಂದು ಹೇಳುವ ವಿಡಿಯೊಗಳು ಬಹಿರಂಗವಾಗಿತ್ತು. ಆದರೆ, ಯಾವುದೇ ವಿಡಿಯೊಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಸುದ್ದಿಸಂಸ್ಥೆಗೆ ಸಾಧ್ಯವಾಗಿಲ್ಲ ಎನ್ನಲಾಗಿದೆ. ‘ಬಿಜೆಪಿಯು ಸುಳ್ಳುಗಳನ್ನು ಹರಡುತ್ತಿದೆ ಎಂಬುದನ್ನು ಇದು ಮತ್ತೆ ಸಾಬೀತುಪಡಿಸುತ್ತಿದೆ. ನಾವು ಚುನಾವಣಾ ಆಯೋಗಕ್ಕೂ ದೂರು ನೀಡಿದ್ದೇವೆ. ಸತ್ಯವನ್ನು ತಿರುಚುವ ಹಾಗೂ ಬೆದರಿಕೆ ಒಡ್ಡುವ ಈ ಹೇಯ ಕೃತ್ಯಕ್ಕೆ ಶಿಕ್ಷೆ ಕಾದಿದೆ’ ಎಂದು ಟಿಎಂಸಿ ಪಕ್ಷದ ಹಿರಿಯ ಮುಖಂಡ ಹಾಗೂ ಸಚಿವ ಶಶಿ ಪಾಂಜಾ ಹೇಳಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.