ಉತ್ತರ ಪ್ರದೇಶ | ಟ್ರಕ್‌ಗೆ ಕಾರು ಡಿಕ್ಕಿ : 6 ಮಂದಿ ಸಾವು ಹಾಪುರ (ಉತ್ತರ ಪ್ರದೇಶ): ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು 6 ಜನ ಮೃತಪಟ್ಟಿದ್ದಾರೆ. ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮೀರತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. # | : - : , ../caN4rxImH7 ‘ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ' ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.