ಆಂಧ್ರಪ್ರದೇಶ: ವೃದ್ಧೆಯನ್ನು ಡೋಲಿಯಲ್ಲಿ ಹೊತ್ತುಕೊಂಡು ಬಂದು ಮತದಾನ ಮಾಡಿಸಿದರು ಹೈದರಾಬಾದ್‌: ಲೋಕಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಈ ನಡುವೆ ಬುಡಕಟ್ಟು ಸಮುದಾಯಕ್ಕೆ ಸೇರಿದ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಮತಗಟ್ಟೆ ತರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರಿಯಾದ ರಸ್ತೆ ಸಂಪರ್ಕವಿಲ್ಲದೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದವರಿಗೆ ಮತ ಚಲಾಯಿಸುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ. ಈ ನಡುವೆ ಕಲ್ಲು ಮುಳ್ಳಿನ ಹಾದಿಯಲ್ಲಿ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಹೆಗಲ ಮೇಲೆ ಹೊತ್ತುಕೊಂಡು ಮತಗಟ್ಟೆಗೆ ಕರೆತಂದಿದ್ದಾರೆ. ಚುನಾವಣೆ ಸಂದರ್ಭ ಕೆಲವೆಡೆ ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ಇನ್ನೊಂದೆಡೆ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಕೇಳಿಬಂದಿದೆ. @ # # # #Andhrapardeshelection2024 ../eI6nkmSVbH ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.