ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದವನ ಬಂಧನ ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆಭರಣ ಕಳ್ಳನನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಡಿಸಿಪಿ ಉಷಾ ರಂಗಾನಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ‘ಕಳೆದ ಒಂದು ವರ್ಷದಲ್ಲಿ ಆರೋಪಿಯು 100ಕ್ಕೂ ಹೆಚ್ಚು ಬಾರಿ ವಿಮಾನಯಾನ ಮಾಡಿದ್ದಾನೆ. ವಿಮಾನದ ಒಳಗೆ ಮತ್ತು ಭದ್ರತಾ ತಪಾಸಣೆಯ ಸಮಯದಲ್ಲಿ ಕಳ್ಳತನ ಮಾಡಿದ್ದಾನೆ’ ಎಂದು ಅವರು ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.