ಹೇಮಂತ್‌ ಸೊರೇನ್‌ ಅರ್ಜಿ ವಿಚಾರಣೆ ನಾಳೆ ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್‌ ಸೊರೇನ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತಾ ಅವರು ಈ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ತಮ್ಮ ಬಂಧನ ಪ್ರಶ್ನಿಸಿ ಹೇಮಂತ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ಮೇ 3ರಂದು ವಜಾಗೊಳಿಸಿತ್ತು. ಈ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ತಮ್ಮ ಬಂಧನ ವಿರೋಧಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಆದೇಶ ಹೊರಬೀಳುವವರೆಗೆ ಲೋಕಸಭೆ ಚುನಾವಣೆಗೆ ಜೆಎಂಎಂ ಪಕ್ಷದ ಪರವಾಗಿ ಪ್ರಚಾರ ನಡೆಸಲು ಜಾಮೀನು ನೀಡುವಂತೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.