ನಾಳೆ ಎಎಪಿ ನಾಯಕರೊಂದಿಗೆ ಅರವಿಂದ ಕೇಜ್ರಿವಾಲ್ ಸಭೆ ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ (ನಾಳೆ) ಎಎಪಿಯ ಎಲ್ಲಾ ಶಾಸಕರ ಸಭೆಯನ್ನು ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಭೆ ನಡೆಯಲಿದೆ. ಇದೊಂದು ಪ್ರಮುಖ ಸಭೆಯಾಗಿದ್ದು, ಮೇ 25 ರಂದು ದೆಹಲಿಯಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದೆನ್ನಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ . ಜೂನ್ 2 ರಂದು ಅವರು ಶರಣಾಗಲು ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.