: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಏಕೆ ರದ್ದುಗೊಳಿಸಲಿಲ್ಲ– ಜೈರಾಮ್ ರಮೇಶ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಪಾಸ್‌ಪೋರ್ಟ್ ಅನ್ನು ಏಕೆ ರದ್ದುಗೊಳಿಸಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈ ರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಕತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದುಗೊಳಿಸಲು ಪ್ರಧಾನಿ ಮೋದಿ ಅವರನ್ನು ತಡೆಯೊಡ್ಡುತ್ತಿರುವ ಅಶವೇನು? ಉದ್ಯಮಿಗಳಾದ ವಿಜಯ ಮಲ್ಯ ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರಂತೆಯೇ ವಿದೇಶಕ್ಕೆ ಪಲಾಯನ ಮಾಡಲು ಪ್ರಜ್ವಲ್‌ಗೆ ಏಕೆ ಹಾಗೂ ಹೇಗೆ ಅವಕಾಶ ಕೊಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.