ಉಗ್ರರ ಇಬ್ಬರು ಸಹಚರರ ಬಂಧನ ಶ್ರೀನಗರ (ಪಿಟಿಐ): ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ಇಬ್ಬರು ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶೋಪಿಯಾನ್‌ನ ಬಾಬಾ ಮೊಹಲ್ಲಾ ನಿವಾಸಿಗಳಾದ ಸುಹೇಬ್ ಇಕ್ಬಾಲ್ ಮಲೀಕ್ ಮತ್ತು ತುಫೇಲ್ ಯೂಸುಫ್ ಮಲೀಕ್ ಅವರನ್ನು ಚೆಕ್‌ಪಾಯಿಂಟ್‌ನಲ್ಲಿ ಬಂಧಿಸಲಾಗಿದೆ. ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.