: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ, ಮತದಾರರಿಗೆ ಕರೆ ನೀಡಿದ್ದಾರೆ. ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ ಎಂದು ಹೇಳಿದ್ದಾರೆ. ಎಕ್ಸ್‌ ಖಾತೆಯಲ್ಲೂ ಪ್ರಧಾನಿ ಮೋದಿ, ಬೆಂಗಾಳಿ, ಅಸ್ಸಾಮಿ, ಕನ್ನಡ, ಗುಜರಾತಿ, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ. ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್‌ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ. 8.39 ಕೋಟಿ ಮಹಿಳಾ ಮತದಾರರು ಸೇರಿ 17.24 ಕೋಟಿ ಮತದಾರರು 3ನೇ ಹಂತದಲ್ಲಿ ಮತದಾನ ಮಾಡಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.