ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ ನವದೆಹಲಿ: ದೆಹಲಿ ಅಬಕಾರಿ ನೀತಿ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಕವಿತಾ ಅವರ ಅರ್ಜಿಯನ್ನು ತಿರಸ್ಕರಿಸಿರುವ ವಿಶೇಷ ನ್ಯಾ. ಕಾವೇರಿ ಬವೇಜಾ, ತನಿಖೆಯ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದಿದ್ದಾರೆ. ಇ.ಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕವಿತಾ ಅವರನ್ನು ಹೈದರಾಬಾದ್‌ನ ಬಂಜಾರ ಹಿಲ್ಸ್‌ ನಿವಾಸದಲ್ಲಿ ಮಾರ್ಚ್‌ 15ರಂದು ಬಂಧಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.