ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್ ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 30ರಂದು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ಪೀಠ, ಸಿಬಿಐ ಹಾಗೂ ಇ.ಡಿಗೆ ನೋಟಿಸ್‌ ಜಾರಿ ಮಾಡಿತು. ಮೇ 8ರಂದು ಪ್ರಕರಣವನ್ನು ವಿಚಾರಣೆ ನಡೆಸಲು ಪಟ್ಟಿ ಮಾಡಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.