<.... (="4003f7db2c4cad014f708d7d69f37697", =".58900D8624C4B350C3F1EF6024F04673..5089ED82C6D010215CCD00693BD165EC..16508")> ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನಲ್ಲಿ ಗಡಿ ಭದ್ರತಾ ಪಡೆಗಳು ಶನಿವಾರ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. : 3.39% . . . . ಉಗ್ರರು ಅಡಗಿರುವ ತಾಣವನ್ನು ಸೇನಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದ್ದಾರೆ. ‘ಸೊಪೋರ್‌ನ ವಾಟರ್‌ಗಾಮ್‌ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡವು’ ಎಂದು ಕಾಶ್ಮೀರ ವಲಯದ ಪೊಲೀಸ್ ಘಟಕವು ‘ಎಕ್ಸ್‌’ನಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.