<.... (="4003f7db2c4cad014f708d7d69f37697", =".58900D8624C4B350C3F1EF6024F04673..ABBE07C373F10A0EB93E43AA8C087DE1..16678")> ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ, ಮಹಾರಾಷ್ಟ್ರದ 27 ಮಂದಿಯ ಶವಗಳ ಮರಣೋತ್ತರ ಪರೀಕ್ಷೆ ಶನಿವಾರ ನಡೆಯಿತು. 10 ದಿನ ಪ್ರವಾಸಕ್ಕಾಗಿ ನೇಪಾಳಕ್ಕೆ ತೆರಳಿದ್ದ ಮಹಾರಾಷ್ಟ್ರದ ಯಾತ್ರಾರ್ಥಿಗಳಿದ್ದ ಬಸ್‌ ನದಿಗೆ ಉರುಳಿಬಿದ್ದು 27 ಮಂದಿ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯ ಬಳಿಕ ಭಾರತೀಯ ವಾಯುಪಡೆಯ ವಿಮಾನದಲ್ಲಿ ಮಹಾರಾಷ್ಟ್ರದ ನಾಸಿಕ್‌ಗೆ ಶವಗಳನ್ನು ಒಯ್ಯಲಾಯಿತು ಎಂದು ಹೇಳಿಕೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.