<.... (="4003f7db2c4cad014f708d7d69f37697", =".58900D8624C4B350C3F1EF6024F04673..2DD395EC3E7766D12F0272AE65C0E634..30203")> ಪ್ರಯಾಗ್‌ರಾಜ್: ಜ್ಞಾನವಾಪಿ ಮಸೀದಿಯ 'ವಝುಖಾನಾ' ಪ್ರದೇಶವನ್ನು (ಪ್ರಾರ್ಥನೆಗೂ ಮುನ್ನ ಅಂಗಾಂಗ ಶುಚಿಗೊಳಿಸುವ ಸ್ಥಳ) ಸಂರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಆದೇಶವಿರುವುದರಿಂದ ಈ ಪ್ರದೇಶದಲ್ಲಿ ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಮಸೀದಿಯ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸಿದೆ. : 3.39% . . . . ಈ ಬಗ್ಗೆ ಅಂಜುಮನ್ ಇಂತೆಜಾಮಿಯಾ ಸಮಿತಿಯು ಗುರುವಾರ ಅಲಹಾಬಾದ್ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ ) ವಝುಖಾನಾದಲ್ಲಿ ಸಮೀಕ್ಷೆ ನಡೆಸುವಂತೆ ಕೋರಿತ್ತು. ವಝುಖಾನ ಮತ್ತು 'ಶಿವಲಿಂಗ'ಕ್ಕೆ ಸಂಬಂಧಿಸಿದ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಈ ಪ್ರದೇಶವನ್ನು ಸಂರಕ್ಷಿಸಲು ತಡೆಯಾಜ್ಞೆ ಇದೆ. ಅದರ ಸುರಕ್ಷತೆ ಮತ್ತು ಭದ್ರತೆಯ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ ಆದ್ದರಿಂದ, ಯಾವುದೇ ಮುಂದಿನ ಕ್ರಮಕ್ಕೆ ಅನುಮತಿಸಲಾಗುವುದಿಲ್ಲ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.