| ನೀವು ರಾಜೀನಾಮೆ ಕೊಡಿ: ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು 'ಈಶ್ವರಪ್ಪ ನೀವು ಹಿರಿಯರು. ರಾಜ್ಯದಲ್ಲಿ ಬಿಜೆಪಿ ಕಟ್ಟಲು ನಿಮ್ಮದೂ ದೊಡ್ಡ ಪಾಲಿದೆ. ಯಾವುದೋ ಪರಿಸ್ಥಿತಿ, ತಪ್ಪು ಸಂದರ್ಭ ತಮ್ಮನ್ನು ಈ ಸನ್ನಿವೇಶಕ್ಕೆ ದೂಡಿದೆ. ಕಾಲ ಮಿಂಚಿಲ್ಲ ವಾಪಸ್ ಬನ್ನಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗದಲ್ಲಿ ಭಾನುವಾರ ಮನವಿ ಮಾಡಿದರು. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಪಕ್ಷದ ಹಿತದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರು ನಮ್ಮೊಂದಿಗೆ ಕೈಜೋಡಿಸಬೇಕು ಎಂದರು. ‘ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಬಿ.ವೈ. ರಾಘವೇಂದ್ರ ಮಾಡಿರುವ ಅಭಿವೃದ್ಧಿಯ ಬಗ್ಗೆ ಜನರು ಮಾತಾಡುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಈಶ್ವರಪ್ಪ ಅವರಿಗೆ ಇನ್ನೂ ಕಾಲ ಮಿಂಚಿಲ್ಲ. ಕೈ ಜೋಡಿಸಿ ಎಂದು ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ’ ಎಂದೂ ಅವರು ಹೇಳಿದರು. ವಿಜಯೇಂದ್ರ ಮಾತಿಗೆ ತಿರುಗೇಟು ನೀಡಿದ ಈಶ್ವರಪ್ಪ, 'ಈಶ್ವರಪ್ಪ ಗೆಲ್ಲಲಿ ಬಿಡು. ನೀನು ಸ್ಪರ್ಧೆ ಮಾಡಬೇಡ ಅಂತಾ ನಿಮ್ಮಣ್ಣ ರಾಘವೇಂದ್ರಗೆ ಹೇಳು. ನೀನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡು' ಎಂದು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.