ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಮೇಲೆ ಕಾನ್‌ಸ್ಟೆಬಲ್‌ನಿಂದಲೇ ಅತ್ಯಾಚಾರ ಜಲೌನ್‌: ಉತ್ತರ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಅವರ ಸಹೋದ್ಯೋಗಿಯೇ ಅತ್ಯಾಚಾರ ಮಾಡಿದ್ದಾನೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ‘ಪೇದೆ ಕರಮ್‌ವೀರ್ ಸಿಂಗ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಮತ್ತು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಶುಕ್ರವಾರ ನೀಡಿದ ದೂರಿನ ತನಿಖೆಗಾಗಿ ಒಂದು ಸಮಿತಿಯನ್ನು ರಚಿಸಿದ್ದೆವು. ಸಮಿತಿ ನೀಡಿದ ವರಧಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಸೀಮ್ ಚೌಧರಿ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.