ಬಿಹಾರ ವಿಧಾನಪರಿಷತ್‌: ನಿತೀಶ್, ರಾಬ್ರಿ ದೇವಿ ಸೇರಿ 11 ಮಂದಿ ಅವಿರೋಧ ಆಯ್ಕೆ ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸತತ ನಾಲ್ಕನೇ ಬಾರಿಗೆ ರಾಜ್ಯ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ನಿತೀಶ್ ಕುಮಾರ್ ಸೇರಿದಂತೆ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಪರಿಷತ್‌ಗೆ ನೇಮಕಗೊಂಡಿದ್ದಾರೆ. ಆರ್‌ಜೆಡಿಯ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಎಚ್‌ಎಂಎಂ ಪಕ್ಷದ ಸಂತೋಷ್ ಸುಮನ್ (ಎಚ್ಎಎಂ), ಬಿಜೆಪಿಯ ಮಂಗಲ್‌ ಪಾಂಡೆ ಅವರು ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.