ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹರಿಯಾಣ ಮಾಜಿ ಸಿಎಂ ಮನೋಹರ್‌ಲಾಲ್ ಖಟ್ಟರ್ ಬೆಂಗಳೂರು: ಹರಿಯಾಣ ಮುಖ್ಯಮಂತ್ರಿ ಸ್ಥಾನ ತೊರೆದ ಮರುದಿನವೇ ಮನೋಹರ್‌ಲಾಲ್ ಖಟ್ಟರ್ ಅವರು ಇಂದು (ಬುಧವಾರ) ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. # | , "... . , ..." ../UGstOJV3oG ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಘೋಷಿಸುತ್ತಿದ್ದೇನೆ. ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಕರ್ನಾಲ್ ವಿಧಾನಸಭಾ ಕ್ಷೇತ್ರದ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ’ ಎಂದು ಅವರು ಹೇಳಿದರು. 2014ರಿಂದ ಖಟ್ಟರ್‌ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ರಾಜೀನಾಮೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಅವರನ್ನು ಕರ್ನಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಲಿದೆ ಎನ್ನಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.