₹5,000 ಕೋಟಿ ವಂಚನೆ: ದೆಹಲಿ ಮೂಲದ ವ್ಯಕ್ತಿ ಬಂಧನ ನವದೆಹಲಿ : ಸೈಬರ್‌ ಅಪರಾಧ ಮತ್ತು ಆನ್‌ಲೈನ್‌ ಗೇಮಿಂಗ್‌ ಮೂಲಕ ₹5,000 ಕೋಟಿ ವಂಚನೆ ಮಾಡಿದ್ದಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ. ದೆಹಲಿಯ ಗ್ರೇಟರ್‌ ಕೈಲಾಶ್‌ ಮೂಲದ ಆಶಿಶ್‌ ಕಕ್ಕರ್‌ ಬಂಧಿತ ವ್ಯಕ್ತಿ. ಮಾ.2ರಂದು ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತನಿಖಾ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ. ಹಣ ಅಕ್ರಮ ವರ್ಗಾವಣೆ ತಡೆಕಾಯ್ದೆಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ಆರೋಪಿಯನ್ನು ಮಾ.12ರ ವರೆಗೆ ಇ.ಡಿ ವಶಕ್ಕೆ ನೀಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.