ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಾರಿಗೆ ಟಿಕೆಟ್? ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ. ಇದರಲ್ಲಿ ಒಟ್ಟು 72 ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿದೆ. ಈ ಮೊದಲು 195 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಇದರೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 267 ಕ್ಷೇತ್ರಗಳಿಗೆ ಟಿಕೆಟ್ ನೀಡಿದಂತಾಗಿದೆ. ಇನ್ನೂ 276 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ. ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. --- ಕರ್ನಾಟಕದಲ್ಲಿ ಟಿಕೆಟ್ ಪಡೆದವರು ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ ಬಾಗಲಕೋಟೆ: ಪಿ.ಸಿ ಗದ್ದಿಗೌಡರ ಬಿಜಾಪುರ: ರಮೇಶ ಜಿಗಜಿಣಗಿ ಗುಲ್ಬರ್ಗ: ಡಾ. ಉಮೇಶ್ ಜಾಧವ್‌ ಬೀದರ್: ಭಗವಂತ ಖೂಬಾ ಕೊಪ್ಪಳ: ಬಸವರಾಜ ಕ್ಯಾವತ್ತೂರ ಬಳ್ಳಾರಿ: ಶ್ರೀರಾಮುಲು ಹಾವೇರಿ: ಬಸವರಾಜ ಬೊಮ್ಮಾಯಿ ಧಾರವಾಡ: ಪ್ರಲ್ಹಾದ ಜೋಶಿ ದಾವಣಗೆರೆ: ಗಾಯತ್ರಿ ಸಿದ್ದೇಶ್ವರ ಶಿವಮೊಗ್ಗ: ಬಿ.ವೈ ರಾಘವೇಂದ್ರ ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ ತುಮಕೂರು: ವಿ. ಸೋಮಣ್ಣ ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮರಾಜನಗರ: ಎಸ್‌. ಬಾಲರಾಜ್‌ ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌ ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌ ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.