ನವಿ ಮುಂಬೈ: ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಯರ ಬಂಧನ ಥಾಣೆ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನವಿ ಮುಂಬೈ ಪೊಲೀಸ್‌ನ ಮಾನವ ಕಳ್ಳ ಸಾಗಣೆ ತಡೆ ಘಟಕವು ಬೆಲಾಪುರ ಪ್ರದೇಶದ ಶಾಬಾಜ್ ಹಳ್ಳಿಯ ವಸತಿ ಸಮುಚ್ಛಯದ ಮೇಲೆ ದಾಳಿ ನಡೆಸಿ ಬಂಧಿಸಿದೆ. ಬಂಧಿತರಲ್ಲಿ 20ರಿಂದ 40 ವರ್ಷದ ಐವರು ಮಹಿಳೆಯರು, ಮೂವರು ಪುರುಷರು ಸೇರಿದ್ದಾರೆ. ಈ 8 ಮಂದಿ ವಲಸೆಗೆ ಸಂಬಂಧಿತ ಯಾವುದೇ ದಾಖಲೆಗಳಿಲ್ಲದೆ ಕಳೆದ 4 ವರ್ಷಗಳಿಂದ ಇಲ್ಲಿ ನೆಲೆಸಿದ್ದರು ಎಂದು ಎನ್‌ಆರ್‌ಐ ಸಂಗ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ 8 ಮಂದಿ ವಿರುದ್ಧ ಪಾಸ್‌ಪೋರ್ಟ್ ಮತ್ತು ವಿದೇಶಿಯರ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.