ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ: ಕಾಂಗ್ರೆಸ್‌ಗೆ ಸೇರ್ಪಡೆ ನವದೆಹಲಿ: ಹರಿಯಾಣದ ಹಿಸಾರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಇಂದು (ಭಾನುವಾರ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ‘ರಾಜಕೀಯ ಕಾರಣಗಳಿಗಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಹಿಸಾರ್ ಸಂಸದನಾಗಿ ಸೇವೆ ಸಲ್ಲಿಸಲು ನನಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಬ್ರಿಜೇಂದ್ರ ಸಿಂಗ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದರು. ‘2023ರ ಅಕ್ಟೋಬರ್ 2ರಂದು ಜಿಂದ್‌ನಲ್ಲಿ ನಡೆದ ರ‍್ಯಾಲಿಯ ಸಂದರ್ಭದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಇದರಿಂದಾಗಿ ನಾನು ಬಿಜೆಪಿ ತೊರೆಯಲು ನಿರ್ಧರಿಸಿದ್ದೆ’ ಎಂದು ಬ್ರಿಜೇಂದ್ರ ಸಿಂಗ್ ಹೇಳಿದ್ದಾರೆ. , . , . , . , & . # | ' . ://./M2MiDj7zlf ../e7a97oqQWM ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.