ಲೋಕಪಾಲ್‌ ಮುಖ್ಯಸ್ಥರಾಗಿ ಖಾನ್ವಿಲ್ಕರ್‌ ಪ್ರಮಾಣ ವಚನ ಸ್ವೀಕಾರ ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಜಯ್‌ ಮಾಣಿಕ್‌ರಾವ್‌ ಖಾನ್ವಿಲ್ಕರ್‌ ಅವರು ಭಾನುವಾರ ‘ಲೋಕಪಾಲ’ದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದರು. ಖಾನ್ವಿಲ್ಕರ್‌ ಅವರು ಮೇ, 2016ರಿಂದ ಜುಲೈ 29, 2022ರವರೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಲೋಕಪಾಲದ ಮುಖ್ಯಸ್ಥರಾಗಿ ಕಳೆದ ತಿಂಗಳು ಇವರನ್ನು ನೇಮಿಸಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.